ಶ್ರುತಿ ಮೀರಿದ ಹಾಡು
ಶ್ರುತಿ ಮೀರಿದ ಹಾಡು
ಪ್ರೇಮ ಸುಳಿವ ಜಾಡು
ಅಂದು ಕನಸಿನರಸ
ಇಂದು ಏನೋ ವಿರಸ
ಹಳಸಿತೆ ಆ ಒಲವು?
ತಳೆಯಿತೆ ಈ ನಿಲುವು?
ಯಾರಿವಳೀ ಹುಡುಗಿ?
ಹೊಸ ಹರೆಯದ ಬೆಡಗಿ
ಸಾವಿನ ನಾಡಿನೊಳು
ಜೀವರಸದ ಹೊನಲು
ಮಗುವಿನ ನಗೆಯವನು
ಮಿಡಿಯುವ ಬಗೆಯವನು
ಬಾಗಿಲ ಬಡಿಯುವನು
ಇಂದು ಯಾರೊ ಇವನು!
ತೆರೆಗಳ ಮೊರೆತದಲಿ
ಆಳದ ಮೌನದಲಿ
ಹೊರಳು ದಾರಿಗಳಲಿ
ನನ್ನ ಮೂಕ ಅಳಲು
- ಬಿ. ಆರ್. ಲಕ್ಷ್ಮಣರಾವ್
1 ಕಾಮೆಂಟ್:
"ಸಾವಿನ ನಾಡಿನೊಳು
ಜೀವರಸದ ಹೊನಲು"
- ಆಹಾ ಎಂತಹ ಸಾಲುಗಳು
--
ರವಿ
ಕಾಮೆಂಟ್ ಪೋಸ್ಟ್ ಮಾಡಿ