ಮಲಗೋ ಮಲಗೆನ್ನ ಮರಿಯೆ
ಮಲಗೋ ಮಲಗೆನ್ನ ಮರಿಯೆ
ಬಣ್ಣದ ನವಿಲಿನ ಗರಿಯೆ
ಎಲ್ಲಿಂದ ಬಂದೆ ಈ ಮನೆಗೆ
ನಂದನ ಇಳಿದಂತೆ ಭುವಿಗೆ?
ತಾವರೆದಳ ನಿನ್ನ ಕಣ್ಣು
ಕೆನ್ನೆ ಮಾವಿನ ಹಣ್ಣು
ಸಣ್ಣ ತುಟಿಯ ಅಂದ
ಬಣ್ಣದ ಚಿಗುರಿಗು ಚಂದ
ನಿದ್ದೆಯ ಮರುಳಲ್ಲಿ ನಗಲು
ಮಂಕಾಯ್ತು ಉರಿಯುವ ಹಗಲು
ಒಲುಮೆ ಹರಸಿದ ಕಂದ
ಹುಣ್ಣಿಮೆ ದೇವಗು ಚೆಂದ
ಬೆಳಕ ಕರೆವ ಅರುಣ
ನಿನ್ನ ನಗೆಯ ಕಿರಣ
ಚೆಲುವಲ್ಲಿ ಸಾಟಿಯೆ ಕಾಮ?
ತಿಮ್ಮಪ್ಪನಿಗು ಮೂರು ನಾಮ !
- ಡಾll ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟ
1 ಕಾಮೆಂಟ್:
nice..
visit my blog @ http://ragat-paradise.blogspot.com
RAGHU
ಕಾಮೆಂಟ್ ಪೋಸ್ಟ್ ಮಾಡಿ