ಬುಧವಾರ, ಫೆಬ್ರವರಿ 1, 2012

ಶ್ರುತಿ ಮೀರಿದ ಹಾಡು 

ಶ್ರುತಿ ಮೀರಿದ ಹಾಡು
ಪ್ರೇಮ ಸುಳಿವ ಜಾಡು

ಅಂದು ಕನಸಿನರಸ
ಇಂದು ಏನೋ ವಿರಸ
ಹಳಸಿತೆ ಆ ಒಲವು?
ತಳೆಯಿತೆ ಈ ನಿಲುವು?

ಯಾರಿವಳೀ ಹುಡುಗಿ?
ಹೊಸ ಹರೆಯದ ಬೆಡಗಿ
ಸಾವಿನ ನಾಡಿನೊಳು
ಜೀವರಸದ ಹೊನಲು

ಮಗುವಿನ ನಗೆಯವನು
ಮಿಡಿಯುವ ಬಗೆಯವನು
ಬಾಗಿಲ ಬಡಿಯುವನು
ಇಂದು ಯಾರೊ ಇವನು!

ತೆರೆಗಳ ಮೊರೆತದಲಿ
ಆಳದ ಮೌನದಲಿ
ಹೊರಳು ದಾರಿಗಳಲಿ
ನನ್ನ ಮೂಕ ಅಳಲು

                               - ಬಿ. ಆರ್. ಲಕ್ಷ್ಮಣರಾವ್

1 ಕಾಮೆಂಟ್‌:

ಅನಾಮಧೇಯ ಹೇಳಿದರು...

"ಸಾವಿನ ನಾಡಿನೊಳು
ಜೀವರಸದ ಹೊನಲು"
- ಆಹಾ ಎಂತಹ ಸಾಲುಗಳು
--
ರವಿ